varthabharthi


ರಾಷ್ಟ್ರೀಯ

ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ನಿಧನ

ವಾರ್ತಾ ಭಾರತಿ : 1 Aug, 2020

ಹೊಸದಿಲ್ಲಿ: ರಾಜ್ಯಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರದ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳಲ್ಲಿ ಕಿಡ್ನಿ ಸಮಸ್ಯೆಗಾಗಿ ಶಸ್ತ್ರಕ್ರಿಯೆಗೊಳಗಾಗಿದ್ದರು.

2008ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕೆ ಸಿಪಿಐ ಬೆಂಬಲ ವಾಪಸ್ ಪಡೆದಿದ್ದ ಸಂದರ್ಭದಲ್ಲಿ ಸಮಾಜವಾದಿ ಪಕ್ಷ ಸರಕಾರಕ್ಕೆ ಬೆಂಬಲ ನೀಡಿದ್ದಾಗ ಅಮರ್ ಸಿಂಗ್ ತಮ್ಮ ಪಕ್ಷದ ಪ್ರಮುಖ ನಾಯಕರಾಗಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)