ಬೆಂಗಳೂರು: ಕೋವಿಡ್ ಸೋಂಕಿತೆಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯ; ಆರೋಪ
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.3: ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತೆಗೆ ವೈದ್ಯನೇ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸೋಂಕಿತ ಯುವತಿ ಚಿಕಿತ್ಸೆ ಪಡೆಯುತ್ತಿದ್ದು, ಜು.25 ರಂದು ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಯ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಈ ಸಂಬಂಧ ಯುವತಿಯು ಟ್ರಾಮಾ ಕೇರ್ ಸೆಂಟರ್ ನ ನೋಡಲ್ ಅಧಿಕಾರಿ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ.ಬಾಲಾಜಿ ಪೈ ಅವರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಸಂತ್ರಸ್ತೆ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
Next Story