varthabharthi


ಕರ್ನಾಟಕ

ಡಿ.ರೂಪಾ ಸೇರಿದಂತೆ 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾ ಭಾರತಿ : 3 Aug, 2020

ಡಿ.ರೂಪಾ

ಬೆಂಗಳೂರು, ಆ.3: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ 16 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಸಿಐಡಿ ಹಾಗೂ ಆರ್ಥಿಕ ಅಪರಾಧಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಉದಯ್‍ ಕುಮಾರ್, ಗೃಹ ಇಲಾಖೆಯ ಸರಕಾರದ ಕಾರ್ಯದರ್ಶಿ(ಪಿಸಿಎಎಸ್) ಹಾಗೂ ಐಜಿಪಿಯಾಗಿ ಡಿ.ರೂಪಾ, ಬೆಂಗಳೂರಿನ ವೈರ್‍ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎನ್.ಶಶಿಕುಮಾರ್ ರನ್ನು ವರ್ಗಾವಣೆ ಮಾಡಲಾಗಿದೆ.

ಸಿಐಡಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಡಾ.ರೋಹಿಣಿ ಕಟೋಚ್ ಸೆಪಟ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ-ಎಂ.ಎನ್.ಅನುಚೇತ್, ಸಿಐಡಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಬಿ.ರಮೇಶ್, ಉಡುಪಿ ಜಿಲ್ಲೆಯ ಕಾರ್ಕಳದ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಾಡಾ ಮಾರ್ಟಿನ್ ಮರ್ಬಾನಿಯಾಂಗ್‍ ರನ್ನು ವರ್ಗಾವಣೆ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಕಮ್ ಪ್ರಕಾಶ್ ಅಮ್ರಿತ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಳಕ್ಕಿಯ ಕರುನಾಗರನ್, ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ ಧರ್ಮೇಂದ್ರ ಕುಮಾರ್ ಮೀನಾ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಹರೀಶ್ ಪಾಂಡೆ, ಬೆಂಗಳೂರು ಕೇಂದ್ರ ಕಚೇರಿಯ ಸಶಸ್ತ್ರ ಮೀಸಲು ಪಡೆಯ ಡಿಸಿಪಿಯನ್ನಾಗಿ ಮುಹಮ್ಮದ್ ಸುಜೀತ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸಿಮಿ ಮರ್ಯಮ್ ಜಾರ್ಜ್, ಬೆಂಗಳೂರು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸಿ.ಬಿ.ವೇದಮೂರ್ತಿ, ಬೆಂಗಳೂರು ನಗರದ ವೈಟ್‍ಫೀಲ್ಡ್ ವಿಭಾಗದ ಡಿಸಿಪಿಯಾಗಿಡಿ.ದೇವರಾಜ ಹಾಗೂ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯನ್ನಾಗಿ ಸಂಜೀವ್ ಎಂ.ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)