varthabharthi


ಕರ್ನಾಟಕ

ನಾವು ರಾಮಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ: ಡಿ.ಕೆ ಶಿವಕುಮಾರ್

ವಾರ್ತಾ ಭಾರತಿ : 3 Aug, 2020

ಬೆಂಗಳೂರು, ಜು.3: ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ನಲ್ಲಿ ಟ್ವೀಟ್ ಮಾಡಲಾಗಿದ್ದು, 'ನಾವು ರಾಮಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ. ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಬಿಜೆಪಿ ಮೊದಲಿನಿಂದಲೂ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾ ಬಂದಿದೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ' ಎಂದು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)