varthabharthi


ಕರ್ನಾಟಕ

ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ನಿಧನ

ವಾರ್ತಾ ಭಾರತಿ : 4 Aug, 2020

ಬೆಂಗಳೂರು, ಆ.4: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಮಂಗಳವಾರ ನಿಧನ ಹೊಂದಿದ್ದಾರೆ. 

ಕಿಡ್ನಿ ವೈಫಲ್ಯದಿಂದ ಅವರು ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿ ಪುರಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸ್ವಗ್ರಾಮದಲ್ಲಿ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)