varthabharthi


ಕರ್ನಾಟಕ

ಆ.5ರಂದು ರಾಮಮಂದಿರದ ಶಿಲಾನ್ಯಾಸ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ

ವಾರ್ತಾ ಭಾರತಿ : 5 Aug, 2020

ಮೈಸೂರು,ಆ.4: ಆ.5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವು ಭಾಗಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಿರುವುದು ಗಮನಕ್ಕೆ ಬಂದಿದ್ದು, ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಯಾವುದೇ ವ್ಯಕ್ತಿಗಳು ಗುಂಪು ಸೇರದಂತೆ, ಯಾವುದೇ ಪೂಜಾ ಕೈಂಕರ್ಯ ಕೈಗೊಳ್ಳದಂತೆ, ವಿಜಯೋತ್ಸವ ಆಚರಿಸದಂತೆ, ಪಟಾಕಿ ಸಿಡಿಸದಂತೆ ಇಂದು ರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)