varthabharthi


ರಾಷ್ಟ್ರೀಯ

12 ವರ್ಷದ ಬಾಲಕಿಯ ಅತ್ಯಾಚಾರಗೈದು, ಮಾರಣಾಂತಿಕ ಹಲ್ಲೆ: ದುಷ್ಕರ್ಮಿಯ ಬಂಧನ

ವಾರ್ತಾ ಭಾರತಿ : 6 Aug, 2020

ಹೊಸದಿಲ್ಲಿ: 12 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರಗೈದು, ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ಈ ಘಟನೆ ನಡೆದಿದೆ.

ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಯಿಂದ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಗೆ ಏಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಲಾಗಿದೆ.

ಪಶ್ಚಿಮ ದಿಲ್ಲಿಯಲ್ಲಿರುವ ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿದ್ದು , ಹೆತ್ತವರು ಕೆಲಸಕ್ಕೆ ಹೋಗಿದ್ದರು. ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ದುಷ್ಕರ್ಮಿ ಚೂಪಾದ ಆಯುಧದಿಂದ ಆಕೆಯ ತಲೆ ಮತ್ತು ಮುಖದ ಮೇಲೆ ಸತತವಾಗಿ ಹೊಡೆದಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯನ್ನು ಗಮನಿಸಿದ ನೆರೆ ಮನೆಯವರು ಹೆತ್ತವರಿಗೆ ಮಾಹಿತಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಮೊದಲು ಸಂಜಯ್ ಗಾಂಧಿ ಮೆಮೊರಿಯಲ್ ಆಸ್ಪತ್ರೆ ಮತ್ತು ನಂತರ ಏಮ್ಸ್ ಗೆ ದಾಖಲಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)