varthabharthi


ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನ: ಒಂದು ಕೋಟಿ ಜನರಿಗೆ ಕೊರೋನ ಸೋಂಕು

ವಾರ್ತಾ ಭಾರತಿ : 6 Aug, 2020

ಕಾಬೂಲ್, ಆ. 6: ಅಫ್ಘಾನಿಸ್ತಾನದಲ್ಲಿ ಸುಮಾರು ಒಂದು ಕೋಟಿ ಜನರು ಕೊರೋನ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಬುಧವಾರ ಆರೋಗ್ಯ ಸಚಿವಾಲಯ ಪ್ರಕಟಿಸಿದ ವರದಿಯೊಂದು ತಿಳಿಸಿದೆ. ಇದು ದೇಶದ ಜನಸಂಖ್ಯೆಯ ಸುಮಾರು ಮೂರನೇ ಒಂದು ಭಾಗದಷ್ಟು ಆಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ದೇಶಾದ್ಯಂತದ ಸುಮಾರು 9,500 ಜನರಿಗೆ ಮಾಡಲಾದ ಪ್ರತಿಕಾಯ ಪರೀಕ್ಷೆಗಳ ಆಧಾರದಲ್ಲಿ ನಡೆಸಲಾದ ಸಮೀಕ್ಷೆಯಿಂದ ಈ ಅಂಕಿಸಂಖ್ಯೆಗಳನ್ನು ಕಲೆಹಾಕಲಾಗಿದೆ ಎಂದು ಆರೋಗ್ಯ ಸಚಿವ ಅಹ್ಮದ್ ಜವಾದ್ ಉಸ್ಮಾನಿ ಪತ್ರಿಕಾಗೋಷ್ಠಿಯೊಂದರಲ್ಲಿ ತಿಳಿಸಿದರು.

ದೇಶದ ಒಟ್ಟು ಜನಸಂಖ್ಯೆಯ 31.5 ಶೇಕಡದಷ್ಟು ಮಂದಿಗೆ ಸೋಂಕು ತಗಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ಈ ಪೈಕಿ ಗರಿಷ್ಠ ಸೋಂಕು ದರ ಕಾಬೂಲ್‌ನಲ್ಲಿ ದಾಖಲಾಗಿದೆ. ನಗರದ 50 ಲಕ್ಷ ಜನಸಂಖ್ಯೆಯ ಅರ್ಧಕ್ಕೂ ಹೆಚ್ಚು ಭಾಗದಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಭಾವಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)