varthabharthi


ಕರಾವಳಿ

ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಮಳೆನೀರು: ಕಾರು ಪಲ್ಟಿ

ವಾರ್ತಾ ಭಾರತಿ : 8 Aug, 2020

ಮಂಗಳೂರು, ಆ.8: ನಗರದ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ನಂತೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ಮೇಲ್ಸೇತುವೆಯಲ್ಲಿ ಚಲಿಸುತ್ತಿತ್ತು. ರಸ್ತೆಯಲ್ಲಿ ಮಳೆನೀರು ತುಂಬಿದ್ದ ಕಾರಣ ಚಾಲಕನ ಅರಿವಿಗೆ ಬಂದಿಲ್ಲ. ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣಕ್ಕೆ ಬಾರದೆ ಕಾರು ಪಲ್ಟಿಯಾಗಿದೆ. ಚಾಲಕ ಯಾವುದೇ ಅಪಾಯ ಗಳಿಲ್ಲದೆ ಪಾರಾಗಿದ್ದಾರೆ. ಈ ಕುರಿತು ಮಂಗಳೂರು ಪೂರ್ವ (ಕದ್ರಿ) ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)