varthabharthi


ಕರ್ನಾಟಕ

ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರಿಗೆ ಕೊರೋನ ಪಾಸಿಟಿವ್

ವಾರ್ತಾ ಭಾರತಿ : 8 Aug, 2020

ದಾವಣಗೆರೆ, ಆ.8: ಹಿರಿಯ ಕಾಂಗ್ರೆಸ್ ಮುಖಂಡ, ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಶುಕ್ರವಾರ ಕೊರೋನ ಟೆಸ್ಟ್ ಗೆ ಒಳಾಗಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಅರಾಮಗಿದ್ದೇನೆ, ಯಾವುದೇ ತೊಂದರೆಯಿಲ್ಲ, ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ.

ನನ್ನ ಕೊರೋನ ಟೆಸ್ಟ್ ಪಾಸಿಟಿವ್ ಬಂದಿದೆ ಅಷ್ಟೆ. ಯಾವುದೇ ರೋಗ ಲಕ್ಷಗಳಿಲ್ಲ, ಅರಾಮಾಗಿದ್ದೇನೆ, ನಾಲ್ಕು ದಿನದಲ್ಲಿ ಗುಣವಾಗಿ ಬರುತ್ತೇನೆ. ಕಾರ್ಯಕರ್ತರು, ಅಭಿಮಾನಿಗಳು, ಜನತೆ ಯಾರೂ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)