varthabharthi


ಕರ್ನಾಟಕ

ತಲಕಾವೇರಿ ದುರಂತ: ಶೋಧ ಕಾರ್ಯಾಚರಣೆಯ ವೇಳೆ ಎರಡು ಕಾರು ಪತ್ತೆ

ವಾರ್ತಾ ಭಾರತಿ : 11 Aug, 2020

ಮಡಿಕೇರಿ, ಆ.11: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯ ವೇಳೆ ಎರಡು ಕಾರುಗಳು ಸಿಕ್ಕಿವೆ.

ಆಗಸ್ಟ್ 5ರಂದು ತಡರಾತ್ರಿ ಭಾರೀ ಮಳೆ ಬ್ರಹ್ಮಗಿರಿ ಬೆಟ್ಟ ಭಾರೀ ಪ್ರಮಾಣದಲ್ಲಿ ಕುಸಿದು ಎರಡು ಮನೆಗಳ ಮೇಲೆ ಬಿದ್ದ ಪರಿಣಾಮ ಐವರು ಜೀವಂತ ಸಮಾಧಿಯಾಗಿದ್ದರು. ಈ ಪೈಕಿ ಓರ್ವರ ಮೃತದೇಹ ಆ.8ರಂದು ಪತ್ತೆಯಾಗಿದೆ. ಕಣ್ಮರೆಯಾದ ಉಳಿದ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಮುಂದುವದಿದೆ. ಈ ವೇಳೆ ಎರಡು ಕಾರುಗಳು ಸಿಕ್ಕಿವೆ.

ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್, ಪತ್ನಿ ಶಾಂತಾ, ಸಹಾಯಕ ಅರ್ಚಕರಾದ ರವಿಕಿರಣ್ ಹಾಗೂ ಶ್ರೀನಿವಾಸ್ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಅರ್ಚಕ ನಾರಾಯಣ ಆಚಾರ್ ಅವರ ಸೋದರ ಆನಂದ ತೀರ್ಥ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)