81 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು, ಆ.11: ಬೆಂಗಳೂರು, ಮಂಗಳೂರು, ಕೋಲಾರ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ ಒಟ್ಟು 81 ಪೊಲೀಸ್ ಇನ್ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ಪಿ.ಡಿ.ಸವಿತೃ ತೇಜ್ ಅವರನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ(ಕದ್ರಿ), ಎಂ.ಎ.ಮುಹಮ್ಮದ್ ಅವರನ್ನು ಕೆಆರ್ ಪುರಂ ಸಂಚಾರ ಪೊಲೀಸ್ ಠಾಣೆಗೆ ಸೇರಿದಂತೆ ಒಟ್ಟು 81 ಇನ್ಸ್ಪೆಕ್ಟರ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
Next Story