ತಪ್ಪಿತಸ್ಥರು ಎಷ್ಟೇ ದೊಡ್ಡವರಾಗಿದ್ದರೂ ಕಠಿನ ಕ್ರಮ: ಗೃಹ ಸಚಿವ ಬೊಮ್ಮಾಯಿ
ಉಡುಪಿ : ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದರು. ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ರವಾನೆ ಮಾಡಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ. ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಸದ್ಯ ಉಡುಪಿ ಪ್ರವಾಸದಲ್ಲಿದ್ದು, ಉಡುಪಿಯಲ್ಲೇ ತಂಗಿದ್ದಾರೆ.
Next Story