varthabharthi


ಕರ್ನಾಟಕ

ಕೆಜಿಎಫ್-2 ಚಿತ್ರೀಕರಣಕ್ಕೆ ನೀಡಿದ ಅನುಮತಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್

ವಾರ್ತಾ ಭಾರತಿ : 12 Aug, 2020

ಬೆಂಗಳೂರು, ಆ.12: ಬಾಲಿವುಡ್ ನಟ ಸಂಜಯ್ ದತ್ ನಟಿಸುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣಕ್ಕೆ ನೀಡಿರುವ ಅನುಮತಿ ರದ್ದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಹುಬ್ಬಳ್ಳಿಯ ಜಿ.ಶಿವಶಂಕರ್ ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ, ಕೆಜಿಎಫ್-2 ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮತ್ತು ನಟ ಸಂಜಯ್ ದತ್ ಅವರನ್ನು ಪ್ರತಿವಾದಿ ಮಾಡಲಾಗಿದೆ.

ಟಾಡಾ ಅಪರಾಧಿಯಾದ ಸಂಜಯ್ ದತ್ ಕೆಜಿಎಫ್-2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರಿಗೆ 10 ವರ್ಷ ಕಾರಾಗೃಹ ಶಿಕ್ಷೆಯಾಗಿತ್ತು. ಈ ವಿಚಾರ ತಿಳಿದಿದ್ದರೂ ಅವರ ನಟನೆಯ ಕೆಜಿಎಫ್-2 ಚಿತ್ರದ ಚಿತ್ರೀಕರಣ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಜನರಿಂದ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಸಂಜಯ್ ದತ್ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಇದು ಜನತೆಯ ಘನತೆಗೆ ಧಕ್ಕೆ ತಂದಂತಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಕೆಜಿಎಫ್-2 ಚಿತ್ರೀಕರಿಸಲು ಹೋಂಬಾಳೆ ಫಿಲಂಸ್‍ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಸರಕಾರಕ್ಕೆ ನಿರ್ದೇಶಿಸಬೇಕು. ಈ ಅರ್ಜಿ ಇತ್ಯರ್ಥವಾಗುವವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)