ದ್ವಿತೀಯ ಪಿಯು: ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು, ಆ.12: ಮಾರ್ಚ್-2020ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆ.14ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿಗೆ ಮೇರೆಗೆ ಮರು ಮೌಲ್ಯಮಾಪನಕ್ಕೆ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು(ಸ್ಕ್ಯಾನ್ಡ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ) ಆ.14ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
Next Story