varthabharthi


ಕರಾವಳಿ

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ: ಶಾಸಕ‌ ಕಾಮತ್

ವಾರ್ತಾ ಭಾರತಿ : 13 Aug, 2020

ಮಂಗಳೂರು, ಆ.13: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮಂಗಳೂರಿನಲ್ಲಿ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗವುದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)