varthabharthi


ಬೆಂಗಳೂರು

ಬೆಂಗಳೂರು ಹಿಂಸಾಚಾರ ಪ್ರಕರಣ

ಗಲಭೆಗೆ ಪೋಸ್ಟ್ ಮಾತ್ರ ಕಾರಣವಲ್ಲ, ರಾಜಕೀಯ ಷಡ್ಯಂತ್ರವಿದೆ: ಆರೋಪಿ ನವೀನ್ ತಂದೆ ಪವನ್‍ ಕುಮಾರ್

ವಾರ್ತಾ ಭಾರತಿ : 14 Aug, 2020

ಬೆಂಗಳೂರು, ಆ.14: ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಗಲಭೆಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ವೊಂದೇ ಕಾರಣವಲ್ಲ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿರಬಹುದೆಂದು ಎಂದು ಆರೋಪಿ ನವೀನ್ ತಂದೆ ಪವನ್‍ ಕುಮಾರ್ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ನನ್ನ ಮಗ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಆದರೆ, ಈ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದೆ ದೊಡ್ಡ ವಿಚಾರವಲ್ಲ. ಇದರಲ್ಲಿ ಇನ್ನಿತರೆ ವಿಚಾರಗಳು ಅಡಗಿದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

ಆ.5ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ದಿನ ನನ್ನ ಮಗ ನವೀನ್ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ಮಾಡಿದ್ದ. ಇದು ಕೂಡ ಘಟನೆಗೆ ಕಾರಣವಾಗಿರಬಹುದು. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸಲಿ ಎಂದು ಅವರು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)