ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನ ಪಾಸಿಟಿವ್
ಮಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದೆ.
ಕೊರೋನ ಸೋಂಕು ದೃಢವಾದ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಗೃಹ ಸಚಿವ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗೃಹ ಸಚಿವರಿಗೆ ಸಿದ್ದರಾಮಯ್ಯ ಹಾರೈಕೆ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೊರೋನ ಸೋಂಕಿಗೆ ಒಳಗಾದ ಸುದ್ದಿ ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
— Basavaraj S Bommai (@BSBommai) September 16, 2020