varthabharthi


ಬೆಂಗಳೂರು

ಡ್ರಗ್ಸ್ ಜಾಲ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ

ವಾರ್ತಾ ಭಾರತಿ : 16 Sep, 2020

ಬೆಂಗಳೂರು, ಸೆ.16: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಎನ್‍ಡಿಪಿಎಸ್ ವಿಶೇಷ ಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಜಾಮೀನು ಕೋರಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಪೀಠದ ಎದುರು ವಿಚಾರಣೆಗೆ ಬಂದಿತ್ತು. ಈ ಪ್ರಕರಣದಲ್ಲಿ ಹೊಸ ವಿಶೇಷ ಸರಕಾರಿ ಅಭಿಯೋಜಕ(ಎಸ್‍ಪಿಪಿ) ನೇಮಕ ಹಿನ್ನೆಲೆಯಲ್ಲಿ ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದರಿಂದ ನ್ಯಾಯಪೀಠವು ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.

ಸಿಸಿಬಿ ಪೊಲೀಸರೂ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.

ಡ್ರಗ್ಸ್ ಪ್ರಕರಣದ ಆರೋಪಿಗಳಾದ ರಾಹುಲ್ ತೋಷೆ, ಶಿವಪ್ರಕಾಶ್, ವಿಜಯ್‍ಕು ಮಾರ್ ಜಾಮೀನು ಅರ್ಜಿ ವಿಚಾರಣೆಯೂ ಸೆ.19ಕ್ಕೆ ಮುಂದೂಡಿಕೆಯಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)