ಭಾರೀ ಮಳೆ : ಸೆ.21, 22ರಂದು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲೆರ್ಟ್
ಉಡುಪಿ, ಸೆ.18: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋರ ಉುಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇಂದು ಅಪರಾಹ್ನದ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆ. 21 ಮತ್ತು 22ರಂದು ರೆಡ್ ಅಲರ್ಟ್ ಹಾಗೂ ಸೆ.20 ಮತ್ತು ಸೆ.23ರಂದು ಆರೆಂಜ್ ಅಲರ್ಟ್ಗಳನ್ನು ಘೋಷಿಸಲಾಗಿದೆ. ಈ ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಕಡಲ ತೀರದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
Next Story