ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೋನ ಸೋಂಕು ದೃಢ
Photo: Facebook
ಬೆಂಗಳೂರು, ಸೆ.19: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಶನಿವಾರ ರಾತ್ರಿ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ‘ನನಗೆ ಕೊರೋನ ಸೋಂಕು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇನೆ. ಸುರಕ್ಷಿತವಾಗಿರಿ’ ಎಂದು ತಿಳಿಸಿದ್ದಾರೆ.
I have been tested positive for #Covid19 today. I have no symptoms.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 19, 2020
Request to all those who had come in contact with me in the last couple of days to get themselves tested as a precautionary measure.
Stay safe!
Next Story