ಕಮಿಷನ್ ದಂಧೆ ಆರೋಪ: ಸಿಎಂ ಪುತ್ರನ ವಿರುದ್ಧ ಡಿಜಿಪಿಗೆ ದೂರು
ಬೆಂಗಳೂರು, ಸೆ.25: ಕಮಿಷನ್ ದಂಧೆ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಚಯ ನಿರ್ಮಾಣ ಕಂಪೆನಿಯಿಂದ ಬಿ.ವೈ.ವಿಜಯೇಂದ್ರ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಈ ದೂರು ನೀಡಲಾಗಿದೆ. ವಸತಿ ಸಮುಚ್ಚಯ ನಿರ್ಮಾಣದ ರಾಮಲಿಂಗಂ ಕನ್ವಕ್ಷನ್ಸ್ ಕಂಪೆನಿಯಿಂದ ನಗದು ಮತ್ತು ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿದೆ ಎಂದು ದೂರಲಾಗಿದೆ.
ಈ ಪ್ರಕರಣದಲ್ಲಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ ದಾಖಲು ಮಾಡಿ ತನಿಖೆ ಕೈಗೊಳ್ಳುವಂತೆ ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ಒತ್ತಾಯಿಸಿದೆ.
Next Story