ಧರಂ ಸಿಂಗ್ಗೆ ಅಂತಿಮ ವಿದಾಯ...
ತೀವ್ರ ಹೃದಯಾಘಾತದಿಂದ ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವನ್ನು ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಶುಕ್ರವಾರ ಸಂಜೆ ರಜಪೂತ ಸಮುದಾಯದ ಸಂಪ್ರದಾಯದಂತೆ ಧರಂ ಸಿಂಗ್ ಅವರ ಹಿರಿಯ ಪತ್ರ, ಮೇಲ್ಮನೆ ಸದಸ್ಯ ವಿಜಯ್ ಸಿಂಗ್ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಸಕಲ ವಿಧಿ-ವಿಧಾನಗಳನ್ನು ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಎಐಸಿಸಿ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೇರಿ ಸಂಪುಟ ಸಚಿವರು, ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
Next Story