varthabharthi

ವಾರ್ತಾಭಾರತಿ 16ನೇ ವಾರ್ಷಿಕ ವಿಶೇಷಾಂಕ ಬಿಡುಗಡೆ

 ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಬುಧವಾರ ನಗರದಲ್ಲಿರುವ ತಮ್ಮ ಸರಕಾರಿ ನಿವಾಸ 'ಕಾವೇರಿ'ಯಲ್ಲಿ ವಾತಾರ್ ಭಾರತಿ ಪತ್ರಿಕೆಯ 16ನೇ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಗರಾಭಿವೃದ್ಧಿ ವಸತಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಅಲ್ಪಸಂಖ್ಯಾತರ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಶಾಸಕ ಎನ್.ಎ.ಹಾರಿಸ್, ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮುಹಮ್ಮದ್ ಬ್ಯಾರಿ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಭಟ್ಕಳ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಖಾಝಿಯ, ವಿಶ್ವಾಸ್ ಬಾವಾ ಬಿಲ್ಡರ್ಸ್‌ನ ಆಡಳಿತ ನಿರ್ದೇಶಕ ಅಬ್ದುರ್ರವೂಫ್ ಪುತ್ತಿಗೆ, ಬೆಂಗಳೂರಿನ ಹಝ್ರತ್ ಹಮೀದ್ ಶಾ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ, ವಾರ್ತಾಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಬೆಂಗಳೂರು ಬ್ಯೂರೊ ಮುಖ್ಯಸ್ಥ ಬಸವರಾಜು, ಹಿರಿಯ ವರದಿಗಾರರಾದ ಪ್ರಕಾಶ್ ರಾಮಜೋಗಿಹಳ್ಳಿ, ಅಮ್ಜದ್ ಖಾನ್ ಕೌದೇನಹಳ್ಳಿ ಮತ್ತಿತರು ಉಪಸ್ಥಿತರಿದ್ದರು.

Comments (Click here to Expand)