varthabharthi

ಮೊದಲ ಹಂತದ ಮತದಾನ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ದೇಶಾದ್ಯಂತ 91 ಕ್ಷೇತ್ರಗಳಲ್ಲಿ ನಡೆಯಿತು. 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತದ ಮತದಾನ ನಡೆಯಿತು. ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಮೇಘಾಲಯ, ಉತ್ತರಾಖಂಡ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಹಾಗೂ ತೆಲಂಗಾಣದ ಎಲ್ಲಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದ್ದು, ಅಸ್ಸಾಂ, ಬಿಹಾರ, ಛತ್ತೀಸ್‌ಗಡ, ಜಮ್ಮುಕಾಶ್ಮೀರ, ಮಹಾರಾಷ್ಟ್ರ, ಮಣಿಪುರ, ಒಡಿಶಾ, ತ್ರಿಪುರಾ, ಉತ್ತರಪ್ರದೇಶ ಹಾಗೂ ಪಶ್ಚಿಮಬಂಗಾಳ ರಾಜ್ಯಗಳ ಕೆಲವು ಕ್ಷೇತ್ರಗಳಲ್ಲಿಯೂ ಗುರುವಾರ ಮತದಾನ ನಡೆಯಿತು.

Comments (Click here to Expand)