varthabharthi

ಫನಿ ಆರ್ಭಟಕ್ಕೆ ಬೆಚ್ಚಿದ ಒಡಿಶಾ

ಫನಿ ಚಂಡಮಾರುತ ಶುಕ್ರವಾರ ಬೆಳಗ್ಗೆ ಒಡಿಶಾ ಕರಾವಳಿಯ ಪುರಿಯಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದು, ಚಂಡ ಮಾರುತದಿಂದ ಸಂಭವಿಸಿದ ವಿವಿಧ ದುರ್ಘಟನೆಗಳಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗಂಟೆಗೆ ಗರಿಷ್ಠ 240ರಿಂದ 245 ಕಿ.ಮೀ ವೇಗದಲ್ಲಿ ಅಪ್ಪಳಿಸಿದ ಚಂಡಮಾರುತದಿಂದ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತ ಬಿ.ಪಿ. ಸೇಥಿ ತಿಳಿಸಿದ್ದಾರೆ. ರಾಜ್ಯದ ರಾಜಧಾನಿ ಭುವನೇಶ್ವರದ ವಿವಿಧ ಭಾಗಗಳಲ್ಲಿ ಹಾಗೂ ಇತರ ಹಲವು ಪ್ರದೇಶಗಳಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಿದೆ. ಮೊಬೈಲ್ ಗೋಪುರಗಳು ಹಾನಿಗೀಡಾಗಿವೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

Comments (Click here to Expand)