varthabharthi

ಮೋದಿ ಸಂಪುಟ ಪ್ರಮಾಣ

17ನೇ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ದ್ವಿತೀಯ ಪರ್ವ ಆರಂಭಗೊಂಡಿದೆ. ಭಾರತದ 14ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.ಪ್ರಧಾನಿ ಜೊತೆಗೆ ಕೇಂದ್ರ ಸಂಪುಟದ 57 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಧಾನಿ ಹಾಗೂ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ವಿದೇಶಿ ಗಣ್ಯರು, ಪ್ರಮುಖ ರಾಜಕಾರಣಿಗಳು ಹಾಗೂ ಧಾರ್ಮಿಕ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 6 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ಸಂಜೆ 7 ಗಂಟೆಯ ಹೊತ್ತಿಗೆ ನೆಹರೂ ಜಾಕೆಟ್ ಧರಿಸಿದ ಮೋದಿ ರಾಷ್ಟ್ರಪತಿಭವನದ ಸಭಾಂಗಣಕ್ಕೆ ಆಗಮಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮೋದಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೋದಿಯವರ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ನೇತೃತ್ವದಲ್ಲಿ ಬಿಜೆಪಿ ಎದುರಿಸಿದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭಿಯಾನದ ಸಂಪೂರ್ಣ ರಣತಂತ್ರವನ್ನು ಸಿದ್ಧಪಡಿಸಿದವರು ಅಮಿತ್ ಶಾ ಎಂದು ಹೇಳಲಾಗುತ್ತಿದೆ. ಉಳಿದಂತೆ, ನಿತಿನ್ ಗಡ್ಕರಿ, ಡಿ.ವಿ. ಸದಾನಂದ ಗೌಡ, ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಮತ್ತು ನಿರ್ಮಲಾ ಸೀತಾ ರಾಮನ್ ಅವರು ಮೋದಿ ಜೊತೆ ಪ್ರಮಾಣ ವಚನ ಸ್ವೀಕರಿಸಿದರು

Comments (Click here to Expand)