varthabharthi

ನೂತನ ಸಚಿವರು

ಬಹು ನಿರೀಕ್ಷಿತ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಂಚಿವ ಸಂಪುಟ ವಿಸ್ತರಣೆಯಾಗಿದ್ದು, ರಾಣೆಬೆನ್ನೂರಿನ ಪಕ್ಷೇತರ ಶಾಸಕ ಆರ್.ಶಂಕರ್ ಮತ್ತು ಮುಳಬಾಗಿಲು ಶಾಸಕ ಎಚ್. ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ 1:15ಕ್ಕೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ವಜುಭಾಯಿ ವಾಲಾ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

Comments (Click here to Expand)