varthabharthi

ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ದೂರು

ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ನೆರೆ ಹಾಗೂ ಅತಿವೃಷ್ಟಿಯನ್ನು ನಿಭಾಯಿಸಲು ಮತ್ತು ಪರಿಣಾಮಕಾರಿಯಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನಾ ಧರಣಿ ನಡೆಸಿದರು. ಗುರುವಾರ ನಗರದ ವೌರ್ಯ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರ ನೇತೃತ್ವದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಬಿ.ಝಡ್.ಝಮೀರ್ ಅಹ್ಮದ್ ಖಾನ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವರಿದ್ದರು.

Comments (Click here to Expand)