varthabharthi

‘ಫಿಟ್ ಇಂಡಿಯಾ’ ಅಭಿಯಾನಕ್ಕೆ ಚಾಲನೆ

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದ ಮುಂಭಾಗದಲ್ಲಿ ‘ಹಾಕಿ’ ಪಟು ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಗುರುವಾರ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಿದೆ. ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.

Comments (Click here to Expand)