varthabharthi

ಯುದ್ಧ ವಿಮಾನವೇರಿದ ರಾಜನಾಥ್..!

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಗುರುವಾರ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಏರೋನಾಟಿಕಲ್ ಡೆವಲಪ್‌ಮೆಂಟ್ ಅಥಾರಿಟಿಯ ರಾಷ್ಟ್ರೀಯ ವಿಮಾನ ಹಾರಾಟ ಪರೀಕ್ಷಾ ವಿಭಾಗದ ನಿರ್ದೇಶಕ ಹಾಗೂ ಏರ್‌ವೈಸ್ ಮಾರ್ಷಲ್ ಎನ್.ತಿವಾರಿ ಜೊತೆ ಸಹ ಪೈಲಟ್ ಆಗಿ 30 ನಿಮಿಷಗಳ ಕಾಲ ಬಾನಂಗಳದಲ್ಲಿ ಯಶಸ್ವಿ ಹಾರಾಟ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಅವರು ತಮ್ಮ ಸಂತಸವನ್ನು ಹಂಚಿಕೊಂಡರು. ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದು ನನ್ನ ಜೀವನದ ಅವಿಸ್ಮರಣೀಯ, ರೋಮಾಂಚನಕಾರಿ ಅನುಭವ. ಪ್ರತಿ ಗಂಟೆಗೆ 1,350 ಕಿ.ಮೀ.ವೇಗದಲ್ಲಿ ಸಂಚರಿಸುವ ಈ ವಿಮಾನವನ್ನು ಎರಡು ನಿಮಿಷ ನಾನು ನಿಯಂತ್ರಣದಲ್ಲಿಟ್ಟುಕೊಂಡಿದ್ದೆ ಎಂದು ಹೇಳಿದ್ದಾರೆ.

Comments (Click here to Expand)