varthabharthi

ಡರ್ಬಿ ಕ್ರೀಡಾಂಗಣದಲ್ಲಿ ಕನ್ನಡದ ಕಂಪು ಪಸರಿಸಿದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು: ವೈರಲ್ ವಿಡಿಯೋ

ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ತಂಡವು ಸೆಮಿಫೈನಲ್ ಪ್ರವೇಶಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್ ಕನ್ನಡದಲ್ಲಿ ಮಾತನಾಡುವ ವಿಡಿಯೋವೊಂದು ವೈರಲ್ ಆಗುತ್ತಿದೆ. 

ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಮತ್ತು ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಭಾರತ ತಂಡದ ಪ್ರಮುಖ ಆಟಗಾರರು. ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ರಾಜೇಶ್ವರಿ ಗಾಯಕ್ವಾಡ್ 5 ವಿಕೆಟ್ ಕಬಳಿಸಿದ್ದರೆ, ವೇದಾ ಕೃಷ್ಣಮೂರ್ತಿ 70 ರನ್ ಬಾರಿಸಿ ಮಿಂಚಿದ್ದರು. ಪಂದ್ಯದ ನಂತರ ನಿರೂಪಕ ಸೈಮನ್ ಡೌಲ್ ಇಬ್ಬರೂ ಆಟಗಾರ್ತಿಯರನ್ನು ಮಾತನಾಡಿಸಿದ್ದಾರೆ. ಈ ಸಂದರ್ಭ ಕನ್ನಡದಲ್ಲಿ ಮಾತನಾಡುವ ಮೂಲಕ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ವೇದಾ ಕೃಷ್ಣಮೂರ್ತಿ ಸಹಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇಬ್ಬರು ಆಟಗಾರ್ತಿಯರ ಕನ್ನಡ ಪ್ರೇಮಕ್ಕೆ ಕನ್ನಡಿಗರು 'ಶಹಬ್ಬಾಸ್' ಎಂದಿದ್ದಾರೆ.

Comments (Click here to Expand)