varthabharthi


ಬೆಂಗಳೂರು

ನನ್ನಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ: ಸಿದ್ದರಾಮಯ್ಯ

ವಾರ್ತಾ ಭಾರತಿ : 10 Aug, 2019

ಬೆಂಗಳೂರು, ಆ. 10: ‘ಬಾದಾಮಿ ಒಂದೇ ಅಲ್ಲ, ಶಾಸಕಾಂಗ ಪಕ್ಷದ ನಾಯಕನಾಗಿ ರಾಜ್ಯದ ಎಲ್ಲ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಆದರೆ ವೈದ್ಯರು ನೀಡಿರುವ ಕೆಲ ಸೂಚನೆಗಳನ್ನು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಬಾದಾಮಿಯ ಶಾಸಕನಾಗಿರುವುದರಿಂದ ಕ್ಷೇತ್ರದ ಜನರು ನನ್ನ ಉಪಸ್ಥಿತಿ ಬಯಸುವುದು ಸಾಮಾನ್ಯ. ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನವೇ ಇಂತಹ ದುರ್ಘಟನೆ ಸಂಭವಿಸಿದ್ದರೆ ಖಂಡಿತಾ ಶಸ್ತ್ರಚಿಕಿತ್ಸೆಯನ್ನು ಸ್ವಲ್ಪ ದಿನಗಳ ಕಾಲ ಮುಂದೂಡುತ್ತಿದ್ದೆ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

‘ಸರಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿ ಜನ-ಜಾನುವಾರುಗಳ ಪ್ರಾಣ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಸಂತ್ರಸ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಕಲ್ಪಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)