varthabharthi


ಕರ್ನಾಟಕ

“ರಾಜ್ಯದ ಎಲ್ಲ ಜಲಾಶಯಗಳು ತುಂಬಿ ತುಳುಕುತ್ತಿವೆ”

ಯಡಿಯೂರಪ್ಪ ಸಿಎಂ ಆದರೆ ಅತಿವೃಷ್ಟಿಯಾಗುತ್ತೆ, ಬರಗಾಲ ಹೋಗುತ್ತೆ ಎಂಬ ಮಾತಿದೆ ಎಂದ ಬಿಎಸ್ ವೈ!

ವಾರ್ತಾ ಭಾರತಿ : 13 Aug, 2019

ಶಿವಮೊಗ್ಗ, ಆ.13: “ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಅತಿವೃಷ್ಟಿಯಾಗುತ್ತೆ, ಬರಗಾಲ ಹೋಗುತ್ತೆ ಎಂಬ ಮಾತು ಎಲ್ಲರ ಬಾಯಲ್ಲೂ ಇದೆ. ಅದೇ ರೀತಿಯಲ್ಲಿ ರಾಜ್ಯದ ಎಲ್ಲ ಜಲಾಶಯಗಳು ತುಂಬಿ ತುಳುಕುತ್ತಿವೆ. ಕೆರೆಕಟ್ಟೆಗಳು ಭರ್ತಿಯಾಗಿವೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರದ ಅಂಜನಾಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಈ ಮಾತುಗಳನ್ನು ಹೇಳಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಜೋರಾಗಿ ಕೂಗಿ, ಚಪ್ಪಾಳೆ ತಟ್ಟಿದ್ದು ಕಂಡುಬಂತು.

ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ತೀರಪ್ರದೇಶ, ಮಲೆನಾಡು ಹಾಗೂ ಮಧ್ಯಕರ್ನಾಟಕ ಸೇರಿದಂತೆ 16 ಜಿಲ್ಲೆಗಳಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ ಇಲ್ಲಿಯವರೆಗೂ 48 ಮಂದಿ ಸಾವನ್ನಪ್ಪಿ, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)