varthabharthi


ಕರಾವಳಿ

ಅಕ್ಟೋಬರ್ 15 ರವರೆಗೆ ಮತದಾರರ ಪಟ್ಟಿ ಲೋಪದೋಷ ಪರಿಷ್ಕರಣೆ: ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ವಾರ್ತಾ ಭಾರತಿ : 16 Sep, 2019

ಮಂಗಳೂರು, ಸೆ.16: ಮತದಾರರ ಪಟ್ಟಿಯಲ್ಲಿ ಲೋಪದೋಷಗಳನ್ನು ಸರಿಪಡಿಸಲು ಸೆ.1ರಿಂದ ಅಕ್ಟೋಬರ್ 15ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂದು ಮತದಾರರ ಸಹಾಯವಾಣಿ, 1950ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. www.nvsp.in ಮೂಲಕ, voter helpline App ಮೂಲಕ ಅಥವಾ ಮತಗಟ್ಟೆ ಅಧಿಕಾರಿಯನ್ನು ಮುಖತಃ ಭೇಟಿ ಮಾಡಿ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)