varthabharthi


ರಾಷ್ಟ್ರೀಯ

ಸುಪ್ರೀಂ ಕೋರ್ಟ್ ಗೆ ನಾಲ್ವರು ಹೊಸ ನ್ಯಾಯಾಧೀಶರ ಸೇರ್ಪಡೆ

ವಾರ್ತಾ ಭಾರತಿ : 23 Sep, 2019

Photo: barandbench.com

ಹೊಸದಿಲ್ಲಿ, ಸೆ.23: ಸುಪ್ರೀಂ ಕೋರ್ಟ್ ಗೆ ನಾಲ್ವರು ಹೊಸ  ನ್ಯಾಯಾಧೀಶರ ಸೇರ್ಪಡೆಯಾಗಿದ್ದು,  ಇದರೊಂದಿಗೆ  ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಧೀಶರ ಸಂಖ್ಯೆ 34ಕ್ಕೆ ಏರಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೃಷ್ಣ ಮುರಾರಿ, ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್, ಹಿಮಾಚಲ ಪ್ರದೇಶದ ಮುಖ್ಯ ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಮತ್ತು ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೃಷಿಕೇಶ ರಾಯ್  ಅವರು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)