varthabharthi


ಬೆಂಗಳೂರು

26 ಮೊಬೈಲ್ ಜಪ್ತಿ; ಅಪ್ರಾಪ್ತ ಬಾಲಕ ಬಂಧನ

ವಾರ್ತಾ ಭಾರತಿ : 6 Nov, 2019

ಬೆಂಗಳೂರು, ನ.6: ಮೊಬೈಲ್ ಕಳವು ಮಾಡುತ್ತಿದ್ದ ಆರೋಪದಡಿ ಅಪ್ರಾಪ್ತ ಬಾಲಕನೋರ್ವನನ್ನು ಎಚ್‌ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜನದಟ್ಟಣೆ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕನನ್ನು ಬಾಲಗೃಹದಲ್ಲಿಡಲಾಗಿದ್ದು, 3 ಲಕ್ಷ ರೂ. ವೌಲ್ಯದ 26 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)