ಮಾಹಿತಿ - ಮಾರ್ಗದರ್ಶನ
ಅಂಗನವಾಡಿ ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ
ವಾರ್ತಾ ಭಾರತಿ : 6 Jul, 2020
ಮಂಗಳೂರು, ಜು.6: ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು 13 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವೆಬ್ಸೈಟ್ ವಿಳಾಸ (www.anganwadirecruit.kar.nic.in)ರಲ್ಲಿ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಜು.30 ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ, ಸ್ವೀಕಾರ ಕೇಂದ್ರ ಕಟ್ಟಡ, ವಾಮಂಜೂರು-575028 ಅಥವಾ ದೂ.ಸಂ.: 0824- 2263199 ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)