varthabharthi


ಮಾಹಿತಿ - ಮಾರ್ಗದರ್ಶನ

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 7 Jul, 2020

ಉಡುಪಿ, ಜು.7: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ದೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

ಇಂಥ ಪ್ರಕರಣಗಳು 2019ರ ಆಗಸ್ಟ್ ತಿಂಗಳಿನಿಂದ 2020ರ ಜುಲೈ ತಿಂಗಳೊಳಗೆ ನಡೆದಿರಬೇಕು. 2002ರ ಆ.1ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.

2020-21ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆ ಗಳನ್ನು ಉಪನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಡುಪಿ ಇವರಿಂದ ಪಡೆದು ಭರ್ತಿಮಾಡಿ ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ದೂರವಾಣಿ: 0820-2574978, 0820-2574972ನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)