varthabharthi


ಮಾಹಿತಿ - ಮಾರ್ಗದರ್ಶನ

​ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 27 Jul, 2020

ಮಂಗಳೂರು, ಜು.27: ತಾಲೂಕಿನ ಕೆಮ್ರಾಲ್ ಗ್ರಾಪಂ ಹಾಗೂ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಪಂ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ವಿಚಾರಕರ ಹುದ್ದೆಗೆ ಮಾಸಿಕ ಏಳು ಸಾವಿರ ರೂ. ಗೌರವ ಸಂಭಾವನೆ ನೀಡಲಾಗುವುದು. ವಿದ್ಯಾರ್ಹತೆ ಎಸೆಸೆಲ್ಸಿಯಾಗಿರಬೇಕು. ಅದೇ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಕೆಮ್ರಾಲ್ ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವು ‘ಪರಿಶಿಷ್ಟ ಜಾತಿ’ಗೆ ಮೀಸಲಾಗಿದೆ. ಶಿರ್ಲಾಲು ಗ್ರಂಥಾಲಯ ಮೇಲ್ವಿಚಾರಕರ ‘ಸಾಮಾನ್ಯ’ ಅರ್ಹತೆ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರ ದೃಢೀಕೃತ ದಾಖಲೆಗಳನ್ನು ಆಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆಗಸ್ಟ್ 29ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತ್/ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯ/ ದೂ.ಸಂ.: 0824- 2441905ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)