varthabharthi


ಮಾಹಿತಿ - ಮಾರ್ಗದರ್ಶನ

ಜಿಪಂ ಖಾತೆ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 28 Jul, 2020

 ಮಂಗಳೂರು, ಜು.28: ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಎಂ.ಕಾಂ/ ಎಂ.ಬಿ.ಎ ಫೈನಾನ್ಸ್ ವಿದ್ಯಾಭ್ಯಾಸ ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆ ದಿನವಾಗಿದೆ.
ಅರ್ಜಿಯನ್ನು ದ.ಕ. ಜಿಲ್ಲಾ ಪಂಚಾಯತ್ ವೆಬ್‌ಸೈಟ್ (zpdk.kar.nic.in) ಮೂಲಕ ಸಲ್ಲಿಸುವಂತೆ ಜಿಪಂ ಸಿಇಒ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)