ಮಾಹಿತಿ - ಮಾರ್ಗದರ್ಶನ
ಜೆಎಸ್ಎಸ್ ಸಮುದಾಯ ಬಾನುಲಿ ಕೇಂದ್ರಕ್ಕೆ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, ಆ.6: ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸಮುದಾಯ ಬಾನುಲಿ ಕೇಂದ್ರಕ್ಕೆ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಟೇಷನ್ ಕೋ ಆರ್ಡಿನೇಟರ್ ಹಾಗೂ ಪ್ರೊಡಕ್ಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪತ್ರಿಕೋದ್ಯಮ, ಎಲೆಕ್ಟ್ರಾನಿಕ್ ಮೀಡಿಯಾ, ಮಾಸ್ಕಮ್ಯೂನಿಕೇಷನ್, ಫೈನ್ಆಟ್ರ್ಸ್ನಲ್ಲಿ ಸ್ನಾತಕೋತ್ತರ ಅಥವಾ ಸ್ನಾತಕ ಪದವಿಗಳನ್ನು ಪಡೆದಿರಬೇಕು. ಹಾಗೂ ಎಫ್ಎಮ್, ಸಮುದಾಯ ರೇಡಿಯೋ ಅಥವಾ ತತ್ಸಮಾನ ಹುದ್ದೆಯಲ್ಲಿ 4ರಿಂದ 6ವರ್ಷ ಕೆಲಸ ಮಾಡಿರುವ ಅನುಭವ ಇರಬೇಕು.
ಅರ್ಹತೆ ಹೊಂದಿರುವ ಆಸಕ್ತರು 200ರೂ.ಗಳ ಡಿಡಿಯನ್ನು ಪ್ರಾಂಶುಪಾಲರು, ಜೆಎಸ್ಎಸ್ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು, ಬಿಎನ್ರಸ್ತೆ, ಮೈಸೂರು-25, ಇವರ ಹೆಸರಿಗೆ ಅರ್ಜಿ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಆ.14 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.0821-2548379, 9686677240 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ