varthabharthi


ಸಿನಿಮಾ

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ : ವರದಿ

ವಾರ್ತಾ ಭಾರತಿ : 11 Aug, 2020

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದೀಗ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ “ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ” ಎಂದಿದ್ದಾರೆ.

ಆದರೆ ಈ ಬಗ್ಗೆ ಸಂಜಯ್ ದತ್ ಕುಟುಂಬ ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)