varthabharthi


ಕರ್ನಾಟಕ

ಸೆ‌. 21ರಿಂದ ಕೇವಲ ಶಾಲೆ ತೆರೆಯಲಿದೆ, ತರಗತಿ ಪ್ರಾರಂಭ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ವಾರ್ತಾ ಭಾರತಿ : 18 Sep, 2020

ಮೈಸೂರು : ಸೆ‌. 21ರಿಂದ ಕೇವಲ ಶಾಲೆ ತೆರೆಯಲಿದೆ, ತರಗತಿ ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ನಗರದ ಪೀಪಲ್ಸ್ ಪಾಕ್೯ನಲ್ಲಿ ಶುಕ್ರವಾರ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತಾನಾಡಿದರು. ಸೆ.30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಸಮಸ್ಯೆಯಾದಲ್ಲಿ ಡಿಡಿಪಿಐ, ಬಿಇಒ ಈ‌ ಬಗ್ಗೆ ಕ್ರಮಕೈಗೊಳ್ಳುವರು. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆ ಆದರೆ ಬಿಇಒ ಸಂಪರ್ಕಿಸಬಹುದು ಎಂದು ಹೇಳಿದರು.

ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ. ಸರ್ಕಾರಿ ಶಾಲೆಯತ್ತ ಪೋಷಕರು ತಮ್ಮ ಮಕ್ಕಳನ್ನ ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ರೆ ಬಿಇಒಯಿಂದ ಕೊಡಿಸುವ ವ್ಯವಸ್ಥೆ ಮಾಡು ತ್ತೇವೆ. ಹೋದಲೆಲ್ಲ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನ ನಿವಾರಿಸುವ ಕೆಲಸ ನಮ್ಮ‌ ಇಲಾಖೆ ಮಾಡಲಿದೆ ಎಂದು ಹೇಳಿದರು.

ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್,  ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)