varthabharthi


ಕರಾವಳಿ

ಡ್ರಗ್ಸ್ ಜಾಲದೊಂದಿಗೆ ನಂಟು ಆರೋಪ: ಡ್ಯಾನ್ಸರ್ ಕಿಶೋರ್ ಶೆಟ್ಟಿ ಪೊಲೀಸ್ ವಶಕ್ಕೆ

ವಾರ್ತಾ ಭಾರತಿ : 19 Sep, 2020

ಮಂಗಳೂರು, ಸೆ.19: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ ಆರೋಪದಲ್ಲಿ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯವರನ್ನು ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಈ ಬಗ್ಗೆ ಅಧಿಕೃತ ಪ್ರಕಟನೆ ಇನ್ನಷ್ಟೆ ಹೊರಬೀಳಬೇಕಾಗಿದೆ. ಕಿಶೋರ್ ಶೆಟ್ಟಿ ಬಾಲಿವುಡ್ ಚಿತ್ರ ‘ಎಬಿಸಿಡಿ’ ಸಹಿತ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದರು. ಅಲ್ಲದೆ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋದಲ್ಲೂ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಸದ್ಯ, ಡ್ರಗ್ಸ್ ಜಾಲದ ಜೊತೆ ನಂಟು ಹೊಂದಿದ ಆರೋಪದಲ್ಲಿ ಇವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಇದರಲ್ಲಿ ಶಾಮೀಲಾಗಿರುವ ಇತರರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)