varthabharthi


ಕರ್ನಾಟಕ

ಸೆ.21, 22ರಂದು ಶಿಕ್ಷಕರ ಕೌನ್ಸೆಲಿಂಗ್

ವಾರ್ತಾ ಭಾರತಿ : 19 Sep, 2020

ಬೆಂಗಳೂರು, ಸೆ.19: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ವೃಂದದ ಬಿಆರ್‍ಪಿ–ಸಿಆರ್‍ಪಿ ಹುದ್ದೆಗಳ ಆಯ್ಕೆಗಾಗಿ ಇದೇ 21 ಮತ್ತು 22ರಂದು ಕೌನ್ಸೆಲಿಂಗ್ ನಡೆಯಲಿದೆ.

ಲಿಖಿತ ಪರೀಕ್ಷೆಯ ಪತ್ರಿಕೆ–1 ಮತ್ತು ಪತ್ರಿಕೆ– 2ರಲ್ಲಿನ ಶೇ 50ರ ನಿಯಮವನ್ನು ಸಡಿಲಿಸಿ, ಮೆರಿಟ್ ಆಧಾರದ ಮೇಲೆ ಪಟ್ಟಿ ಸಿದ್ಧ ಮಾಡಲು ಆಯಾ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಖಾಲಿ ಇರುವ ಹುದ್ದೆಗಳ ವಿವರವನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ದಾಖಲಿಸಲಾಗಿದ್ದು, ಈ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಕೌನ್ಸೆಲಿಂಗ್‍ಗೆ ಅರ್ಹರಾದವರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಅಭ್ಯರ್ಥಿಗಳಿಗೆ 21 ಮತ್ತು 22ರಂದು ಕೌನ್ಸೆಲಿಂಗ್ ನಡೆಸಲಾಗುತ್ತದೆ. ಇದೇ ಫೆಬ್ರುವರಿ ಮತ್ತು ಮೇ ತಿಂಗಳಲ್ಲಿ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳದವರಿಗೆ ಈ ಕೌನ್ಸೆಲಿಂಗ್ ಗೆ ಹಾಜರಾಗಲು ಅವಕಾಶವಿಲ್ಲ ಎಂದು ಇಲಾಖೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)