varthabharthi


ಬೆಂಗಳೂರು

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ: ರಾಜಕಾರಣಿ ಪುತ್ರನ ಪತ್ತೆಗಾಗಿ ಲುಕ್‍ಔಟ್ ನೋಟಿಸ್

ವಾರ್ತಾ ಭಾರತಿ : 21 Sep, 2020

ಬೆಂಗಳೂರು, ಸೆ.21:ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಸಿಸಿಬಿ ತಿಳಿಸಿದೆ.

ಸ್ಯಾಂಡಲ್‍ವುಡ್‍ಗೆ ಡ್ರಗ್ಸ್ ನಂಟು ಆರೋಪ ಹಿನ್ನೆಲೆಯಲ್ಲಿ ಕಾಟನ್ ಪೇಟೆಯಲ್ಲಿ ದಾಖಲಾಗಿದ್ದ ಪ್ರಕರಣ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈವರೆಗೂ 10 ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಆದಿತ್ಯ ಅಳ್ವ ಪ್ರಮುಖ ಆರೋಪಲಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)