varthabharthi


ಕರಾವಳಿ

ಡ್ರಗ್ಸ್ ಪ್ರಕರಣ: ಡ್ಯಾನ್ಸರ್ ಕಿಶೋರ್ ಶೆಟ್ಟಿ ಜೊತೆ ಸಂಪರ್ಕದಲ್ಲಿದ್ದ ಯುವತಿಯ ಸೆರೆ

ವಾರ್ತಾ ಭಾರತಿ : 22 Sep, 2020

ಮಂಗಳೂರು, ಸೆ.22: ಮಾದಕ ವಸ್ತು ಸಾಗಾಟ ಆರೋಪದಲ್ಲಿ ಇತ್ತೀಚೆಗೆ ಬಂಧಿತ ಡ್ಯಾನ್ಸರ್, ನಟ ಕಿಶೋರ್ ಅಮನ್ ಶೆಟ್ಟಿ (30) ಜೊತೆ ಸಂಪರ್ಕದಲ್ಲಿದ್ದ ಆರೋಪದಲ್ಲಿ ಓರ್ವ ಯುವತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಣಿಪುರ ಮೂಲದ ಆಸ್ಕಾ ಎಂಬ ಯುವತಿಯನ್ನು ಬಂಧಿಸಲಾಗಿದೆ. ಈಕೆ ಕಿಶೋರ್ ಜೊತೆಗೆ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 ಕಿಶೋರ್ ಶೆಟ್ಟಿ ಸಂಪರ್ಕದಲ್ಲಿದ್ದು, ಡ್ರಗ್ಸ್ ಸೇವನೆ ಆರೋಪದಲ್ಲಿ ಇಬ್ಬರು ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಅವರಿಬ್ಬರ ರಕ್ತದ ಮಾದರಿಯನ್ನು ಡ್ರಗ್ಸ್ ಸೇವನೆ ಪತ್ತೆಗಾಗಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ಆಸ್ಕಾ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಲಾಗಿದೆ. ಇನ್ನೊಬ್ಬಳು ಯುವತಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾದಕ ವಸ್ತು ಸೇವನೆ ಹಾಗೂ ಪೂರೈಕೆ ಆರೋಪದಲ್ಲಿ ಅಕೀಲ್ ನೌಶೀಲ್ ಮತ್ತು ಡ್ಯಾನ್ಸರ್, ನಟ ಕಿಶೋರ್ ಶೆಟ್ಟಿಯನ್ನು ಸೆ.19ರಂದು ಮಂಗಳೂರು ಸಿಸಿಬಿ ಪೊಲೀಸರು ನಗರದ ಕದ್ರಿ ಪದವು ಪರಿಸರದಲ್ಲಿ ಬಂಧಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)