varthabharthi


ಕ್ರೀಡೆ

ಐಪಿಎಲ್: ಪ್ಲೆಸಿಸ್ ಹೋರಾಟ ವ್ಯರ್ಥ; ರಾಜಸ್ಥಾನಕ್ಕೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್

ವಾರ್ತಾ ಭಾರತಿ : 22 Sep, 2020

ಶಾರ್ಜಾ, ಸೆ.22: ಎಫ್‌ಡು ಪ್ಲೆಸಿಸ್ ಏಕಾಂಗಿ ಹೋರಾಟದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಟ್ವೆಂಟಿ-20 ಟೂರ್ನಿಯ 4ನೇ ಪಂದ್ಯವನ್ನು 16 ರನ್‌ಗಳ ಅಂತರದಿಂದ ಕಳೆದುಕೊಂಡಿದೆ.

ಇಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಗೆಲ್ಲಲು 217 ರನ್ ಕಠಿಣ ಗುರಿ ಬೆನ್ನಟ್ಟಿದ ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 200 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಪ್ಲೆಸಿಸ್(72, 37 ಎಸೆತ, 1 ಬೌಂಡರಿ, 7 ಸಿಕ್ಸರ್)ಸರ್ವಾಧಿಕ ಸ್ಕೋರ್ ಗಳಿಸಿದರೆ, ವಾಟ್ಸನ್(33),ನಾಯಕ ಎಂಎಸ್ ಧೋನಿ (ಔಟಾಗದೆ 29,17 ಎಸೆತ, 3 ಸಿಕ್ಸರ್), ಕೇದಾರ್ ಜಾಧವ್(22)ಹಾಗೂ ವಿಜಯ್(21)ಎರಡಂಕೆಯ ಸ್ಕೋರ್ ಗಳಿಸಿದರು.ಸ್ಪಿನ್ನರ್ ರಾಹುಲ್ ಟೆವಾಟಿಯ ದುಬಾರಿಯಾದರೂ 37 ರನ್‌ಗೆ 3 ವಿಕೆಟ್ ಉರುಳಿಸಿದರು. 

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ ತಂಡ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಹಾಗೂ ನಾಯಕ ಸ್ಟೀವ್ ಸ್ಮಿತ್ ಅರ್ಧಶತಕದ ಕೊಡುಗೆಯ ಬೆಂಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)