varthabharthi


ಕರ್ನಾಟಕ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಬಂದ್

ವಾರ್ತಾ ಭಾರತಿ : 24 Sep, 2020

ಶಿವಮೊಗ್ಗ : ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆಯೊಂದು ಕುಸಿತವಾದ ಪರಿಣಾಮ ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ರಂಜದಕಟ್ಟೆಯ ಬಿಂತದ ಹಳ್ಳಕ್ಕೆ ‌ನಿರ್ಮಿಸಿರುವ ಈ ಸೇತುವೆ ಕುಸಿತವಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ‌ ಇದೇ ಮಾರ್ಗವಾಗಿ ಪ್ರತಿದಿನ ನೂರಾರು ಮಂದಿ ಉಡುಪಿ, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿಯೂ ತೆರಳುತ್ತಿದ್ದರು. ಇದೀಗ ಸೇತುವೆ ಕುಸಿತದಿಂದ ಆ್ಯಂಬುಲೆನ್ಸ್ ಸೇರಿದಂತೆ ವಾಹನಗಳು ಹರಸಾಹಸ ಪಡಬೇಕಾಗಿದೆ.

ಪಿಡಬ್ಲೂಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷವೇ ಸೇತುವೆ ಕುಸಿತಕ್ಕೆ‌ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)